ಯೂನಿಯನ್ ಬ್ಯಾಂಕ್ ನೇಮಕಾತಿ; 1500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನ
ನ್ಯೂಸ್ ಆ್ಯರೋ: ಕೇಂದ್ರ ಸರ್ಕಾರದ ಅಡಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ 8500 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಮುಂಬೈನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಯೂನಿಯನ್ ಬ್ಯಾಂಕ್‌ನಲ್ಲಿ ಸರಿಸುಮಾರು 75,000 ಉದ್ಯೋಗಿಗಳಿದ್ದಾರೆ. ಇದೀಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಖಾಲಿ ಹುದ್ದೆ ಭರ್ತಿಗೆ ಮುಂದಾಗಿದೆ.
ಖಾಲಿ ಹುದ್ದೆಗಳು: 1500 ಹುದ್ದೆಗಳು ಲಭ್ಯವಿದೆ,
ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.
ವಯಸ್ಸಿನ ಮಿತಿ: 20-30 ವರ್ಷಗಳು. ಎಸ್‌ಸಿ/ಎಸ್‌ಟಿ (5 ವರ್ಷಗಳು), ಒಬಿಸಿ (3 ವರ್ಷಗಳು) ಮತ್ತು ಜನರಲ್ ಪಿಡಬ್ಲ್ಯೂಡಿ (10 ವರ್ಷಗಳು) ಸರ್ಕಾರಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಅರ್ಜಿ ಶುಲ್ಕ: ₹850 (ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ₹175), ಆನ್‌ಲೈನ್‌ನಲ್ಲಿ ಪಾವತಿಸಬಹುದು.
ವೇತನ: ತಿಂಗಳಿಗೆ ₹48,480 ರಿಂದ ₹85,920.
ಹಲವು ಹಂತ ಹಾಗೂ ವಿಭಾಗದ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಹಾಗೂ ಸೂಕ್ತರು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ. ಆಯ್ಕೆಯಾದ ಅಭ್ಯರ್ಥಿಗಳ ಸಂಖ್ಯೆಯ ಆಧಾರದ ಮೇಲೆ ಸಂದರ್ಶನವನ್ನು ನಡೆಸಲಾಗುತ್ತದೆ.
ಪರೀಕ್ಷಾ ಕೇಂದ್ರಗಳು: ಬೆಂಗಳೂರು ಸೇರಿದಂತೆ ಭಾರತದಾದ್ಯಂತ ಪ್ರಮುಖ ನಗರಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. ಈ ಕುರಿತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.
ಕೊನೆಯ ದಿನಾಂಕ: ನವೆಂಬರ್ 13, 2024.
ಅರ್ಜಿ ಸಲ್ಲಿಸುವುದು ಹೇಗೆ: https://www.unionbankofindia.co.in/english/recruitment.aspx ನಲ್ಲಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ. ಅರ್ಜಿ ಸಲ್ಲಿಕೆ, ಅರ್ಹತೆ, ಸಲ್ಲಿಸಬೇಕಾದ ದಾಖಲೆ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆ ಪರಿಶೀಲಿಸಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
Leave a Comment