ಮಾಜಿ‌ ಸಿಎಂ ಯಡಿಯೂರಪ್ಪ ವಿರುದ್ಧ ಪೊಕ್ಸೊ ಪ್ರಕರಣ – ಮತ್ತೆ ಬಿಎಸ್ವೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

20240712 170916
Spread the love

ನ್ಯೂಸ್ ಆ್ಯರೋ : ಈಗಾಗಲೇ ದಾಖಲಾಗಿರುವ ಪೊಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಈಗಾಗಲೇ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಲಾಗಿತ್ತು. ಇದೀಗ ಮತ್ತೆ ಹೈಕೋರ್ಟ್ ಖುದ್ದು ಹಾಜರಾತಿಯಿಂದ ಬಿಎಸ್ ವೈಗೆ ವಿನಾಯ್ತಿ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನ ಏಕಸದಸ್ಯ ಪೀಠವು ವಿಚಾರಣೆ ನಡೆಸಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆಯನ್ನು ಜುಲೈ26ಕ್ಕೆ ನಿಗದಿ ಪಡಿಸಿದೆ.

ಹಾಗಾಗಿ ಜುಲೈ 25ರವರೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಇತರೆ ಆರೋಪಿಗಳಿಗೆ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿ ಮಧ್ಯಂತರ ಆದೇಶವನ್ನು ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿತ್ತು. ಈ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಹೈಕೋರ್ಟ್ ಖುದ್ದು ವಿಚಾರಣೆಯ ಹಾಜರಾತಿಗೆ ವಿನಾಯ್ತಿ ನೀಡಿ ಆದೇಶಿಸಿತ್ತು. ಈಗ ಮತ್ತೆ ಇದನ್ನು ವಿಸ್ತರಣೆ ಮಾಡಿ ಆದೇಶಿಸಿದೆ.

Leave a Comment

Leave a Reply

Your email address will not be published. Required fields are marked *

error: Content is protected !!