ಅಮೆರಿಕ ಅಧ್ಯಕ್ಷೀಯ ಚುನಾವಣೆ; ಡೊನಾಲ್ಡ್ ಟ್ರಂಪ್ ಗೆ ಭರ್ಜರಿ ಮುನ್ನಡೆ
ನ್ಯೂಸ್ ಆ್ಯರೋ: ಅಮೆರಿಕದ ಅತಿದೊಡ್ಡ ವಿಂಗ್ ರಾಜ್ಯವಾದ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ 19 ಎಲೆಕ್ಟೋರಲ್ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
ಸದ್ಯ ಯುಎಸ್ ಚುನಾವಣೆಯ ಫಲಿತಾಂಶಗಳಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಚುನಾವಣಾ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗಿಂತ ಬಹಳ ಮುಂದಿದ್ದಾರೆ.
ಬೆಳಗ್ಗೆ 11.45ರ ಗಂಟೆಯವರೆಗಿನ ಸುದ್ದಿ ಪ್ರಕಾರ ಕಮಲಾ ಹ್ಯಾರಿಸ್ 213 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದರೆ, ಡೊನಾಲ್ಡ್ ಟ್ರಂಪ್ 251 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದಾರೆ.
ಅಂದಹಾಗೆ ಯುಎಸ್ ಚುನಾವಣೆಯಲ್ಲಿ ಒಟ್ಟು 538 ಎಲೆಕ್ಟೋರಲ್ ಮತಗಳಲ್ಲಿ 270 ಮತಗಳನ್ನು ಪಡೆದವರು ಬಹುಮತ ಪಡೆಯುತ್ತಾರೆ. ಸದ್ಯದ ಟ್ರೆಂಡ್ ಪ್ರಕಾರ ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಬಹುಮತ ಪಡೆದು ಅಧಿಕಾರಕ್ಕೆ ಬಂದಿದ್ದಾರೆ. ಆ ಮೂಲಕ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಹಿಂದುಳಿದಿದ್ದಾರೆ.
ಪೆನ್ಸಿಲ್ವೇನಿಯಾದಲ್ಲಿ ಶೇ 50 ರಷ್ಟು ಮತಗಳನ್ನು ಎಣಿಕೆ ಮಾಡಲಾಗಿದೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶೇ 50.14 ರಷ್ಟು ಮತಗಳ ಮುನ್ನಡೆ ಸಾಧಿಸಿದ್ದಾರೆ. ಡೆಮಾಕ್ರಟಿಕ್ ಪಕ್ಷದ ನಾಯಕಿ ಕಮಲಾ ಹ್ಯಾರಿಸ್ ಅವರು ಶೇ 48.95 ಮತಗಳೊಂದಿಗೆ ಹಿನ್ನಡೆ ಅನುಭವಿಸುತ್ತಿದ್ದಾರೆ.
Leave a Comment