ಬಿಯರ್ ಕ್ಯಾನ್ ಹಿಡಿದು ಯೋಗ – ಇದೇನಿದು ಹೊಸ ಆಸನ? ಇಲ್ಲಿದೆ ಕುತೂಹಲಕಾರಿ ಸಂಗತಿ…

ಬಿಯರ್ ಕ್ಯಾನ್ ಹಿಡಿದು ಯೋಗ – ಇದೇನಿದು ಹೊಸ ಆಸನ? ಇಲ್ಲಿದೆ ಕುತೂಹಲಕಾರಿ ಸಂಗತಿ…

ನ್ಯೂಸ್ ಆ್ಯರೋ‌ : ಭಾರತೀಯ ಮೂಲದ ಯೋಗದ ಮಹತ್ವ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಜೂ. 21ರಂದು ವಿಶ್ವ ಯೋಗ ದಿನವನ್ನು ಪಾಶ್ಚಾತ್ಯ ದೇಶಗಳಲ್ಲೂ ಆಚರಿಸಲಾಗುತ್ತಿದೆ. ಬದಲಾದ ಜೀವನ ಶೈಲಿಯಿಂದ ಬಹು ಬೇಗನೆ ದೇಹ ರೋಗದ ಗೂಡಾಗುತ್ತಿದ್ದು, ಇದರ ನಿವಾರಣೆಗೆ, ಉತ್ತಮ ಆರೋಗ್ಯಕ್ಕೆ ಯೋಗ ಪೂರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇತ್ತೀಚೆಗೆ ವಿದೇಶಗಳಲ್ಲಿ ಕೈಯಲ್ಲಿ ಬಿಯರ್ ಕ್ಯಾನ್ ಹಿಡಿದು ಯೋಗ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

ಯೋಗ ಮಾಡಲು ಮನುಷ್ಯ ಮತ್ತು ಅವನ ಮನಸ್ಸು ಶಾಂತವಾಗಿರಬೇಕು. ಆದರೆ ಯುವಕರಿಗೆ ಹಾಗೆ ಮಾಡುವುದು ಸ್ವಲ್ಪ ಕಷ್ಟ. ಯೋಗವು ಹವ್ಯಾಸವಾಗಿ ಪ್ರಾರಂಭವಾದರೂ ಅವರು ಅದನ್ನು ದೀರ್ಘಕಾಲದವರೆಗೆ ಅಭ್ಯಾಸ ಮಾಡುವುದು ಸುಲಭದ ಮಾತಲ್ಲ. ಅಂಥವರಿಗಾಗಿಯೇ ಬಿಯರ್ ಯೋಗ ಎಂಬ ಹೊಸ ಟ್ರೆಂಡ್ ಆರಂಭವಾಗಿದೆ. ಡೆನ್ಮಾರ್ಕ್ ನ ರಾಜಧಾನಿ ಕೋಪನ್ ಹೆಗನ್ ನಲ್ಲಿ ರಸ್ತೆ ಬದಿಯಲ್ಲಿ ಕೆಲವರು ಈ ರೀತಿ ಯೋಗ ಮಾಡುತ್ತಿರುವ ವೀಡಿಯೋವನ್ನು ಎಎಫ್ ಪಿ ಸುದ್ದಿ ಸಂಸ್ಥೆ ಪೋಸ್ಟ್ ಮಾಡಿದೆ.

ಎರಡು ದಿನಗಳಲ್ಲಿ ಈ ವೀಡಿಯೊ 76,000ಕ್ಕೂ ಹೆಚ್ಚು ವೀಕ್ಷಣೆ ಗಳಿಸಿದೆ. ಇದನ್ನು ನೋಡಿ ಭಾರತೀಯ ಯುವಕರು ಡೆನ್ಮಾರ್ಕ್‌ಗೆ ಓಡಿ ಹೋದರೆ ಗತಿಯೇನು ಎಂದು ಒಬ್ಬರು ತಮಾಷೆಯಾಗಿ ಕೇಳಿದರೆ, ಮತ್ತೊಬ್ಬರು ಸಾಂಪ್ರದಾಯಿಕ ಯೋಗಕ್ಕಿಂತ ಇದು ಉತ್ತಮ ಎಂದು ಪ್ರತಿಕ್ರಿಯಿಸಿದ್ದಾರೆ. ಇದು ಭಾರತೀಯ ಸಂಪ್ರದಾಯದ ಅಣಕ ಎಂದೂ ನೆಟ್ಟಿಗರು ಹೇಳಿದ್ದಾರೆ.

ಎಲ್ಲೆಲ್ಲಿ ಟ್ರೆಂಡ್?

ಬಿಯರ್ ಯೋಗದ ಟ್ರೆಂಡ್ ವಿದೇಶಗಳಲ್ಲಿ ಬಹಳ ಜನಪ್ರಿಯವಾಗಿದೆ. ಮೊದಲು ಇದು ಜರ್ಮನಿಯಲ್ಲಿ ಕಾಣಿಸಿಕೊಂಡಿತು. ನಂತರ ಕ್ರಮೇಣ ಆಸ್ಟ್ರೇಲಿಯಾ ಮತ್ತು ಅಮೆರಿಕ ಕೂಡ ಈ ಟ್ರೆಂಡ್ ಅನ್ನು ಅನುಸರಿಸಿದವು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *