49 ವರ್ಷದ ಮಹಿಳೆಯ ಹೊಟ್ಟೆಯೊಳಗೆ ಇತ್ತು ಬರೋಬ್ಬರಿ 15 ಕೆಜಿ ಗಡ್ಡೆ – ಯಶಸ್ವಿಯಾಗಿ ಹೊರ ತೆಗೆದ ವೈದ್ಯರು

49 ವರ್ಷದ ಮಹಿಳೆಯ ಹೊಟ್ಟೆಯೊಳಗೆ ಇತ್ತು ಬರೋಬ್ಬರಿ 15 ಕೆಜಿ ಗಡ್ಡೆ – ಯಶಸ್ವಿಯಾಗಿ ಹೊರ ತೆಗೆದ ವೈದ್ಯರು

ನ್ಯೂಸ್ ಆ್ಯರೋ‌ : ಅಪರೂಪದ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಮಧ್ಯ ಪ್ರದೇಶದ ಇಂದೋರ್ ನ ಇಂಡೆಕ್ಸ್ ಆಸ್ಪತ್ರೆಯ ವೈದ್ಯರು ಗಮನ ಸೆಳೆದಿದ್ದಾರೆ. ಮಹಿಳೆಯ ಹೊಟ್ಟೆಯಲ್ಲಿದ್ದ ಬರೋಬ್ಬರಿ 15 ಕೆಜಿ ಗಡ್ಡೆಯನ್ನು ಹೊರ ತೆಗೆದಿದ್ದಾರೆ.

ಏನಾಗಿತ್ತು?

ಇಂದೋರ್ ನ 49 ವರ್ಷದ ಮಹಿಳೆ ಹೊಟ್ಟೆ ನೋವು ಮತ್ತು ತೀವ್ರ ಸುಸ್ತಾಗುತ್ತಿರುವ ಬಗ್ಗೆ ಮನೆಯವರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆ ತರಲಾಗಿತ್ತು. ತಪಾಸಣೆ ನಡೆಸಿದಾಗ ಹೊಟ್ಟೆಯಲ್ಲಿ ಭಾರೀ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿತ್ತು.

”ಹೊಟ್ಟೆಯಲ್ಲಿ ಈ ಗಡ್ಡೆಯ ಬೆಳವಣಿಗೆಯಿಂದಾಗಿ ಮಹಿಳೆಗೆ ಆಹಾರ ಸೇವಿಸುವುದಕ್ಕೂ ಕಷ್ಟವಾಗುತ್ತಿತ್ತು. ಜೊತೆಗೆ ನಡೆದಾಡಲೂ ಪ್ರಯಾಸವಾಗುತ್ತಿತ್ತು” ಎಂದು ಶಸ್ತ್ರ ಚಿಕಿತ್ಸೆಯ ನೇತೃತ್ವ ವಹಿಸಿದ್ದ ಡಾ. ಅತುಲ್ ವ್ಯಾಸ್ ಹೇಳಿದ್ದಾರೆ. ಈ ಗಡ್ಡೆ ತೆಗೆಯಲು 12 ವೈದ್ಯರು ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದರು.

”ಈ ಗಡ್ಡೆ ಹಲವು ನರಗಳಿಗೆ ಅಂಟಿಕೊಂಡಿತ್ತು. ಹೀಗಾಗಿ ಶಸ್ತ್ರ ಚಿಕಿತ್ಸೆ ಸಂಕೀರ್ಣವಾಗಿತ್ತು. ಬಹಳ ನಾಜೂಕಿನಿಂದ ನಿಭಾಯಿಸಿದೆವು. ಈ ಗಡ್ಡೆ ಇನ್ನೇನು ಒಡೆದು ಹೋಗುವ ಸ್ಥಿತಿಯಲ್ಲಿತ್ತು. ಇದು ಮತ್ತಷ್ಟು ಜೀವಾಪಾಯಕ್ಕೆ ಕಾರಣವಾಗುವುದರಲ್ಲಿತ್ತು” ಎಂದು ಡಾ. ಅತುಲ್ ತಿಳಿಸಿದ್ದಾರೆ.

ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಮಹಿಳೆ ಆರೋಗ್ಯ ಹೊಂದುತ್ತಿದ್ದು, ಶೀಘ್ರ ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Related post

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Leave a Reply

Your email address will not be published. Required fields are marked *