ಪರಪ್ಪನ‌ ಅಗ್ರಹಾರದಲ್ಲಿ ಬರ್ತ್‌ಡೇ ಸೆಲೆಬ್ರೇಶನ್ ಮಾಡಿಕೊಂಡ ಕೊಲೆ ಆರೋಪಿ – ಫೋಟೋ ವೈರಲ್ ಆದ್ರೂ, ಅಧಿಕಾರಿಗಳು ಗಪ್ ಚುಪ್!

ಪರಪ್ಪನ‌ ಅಗ್ರಹಾರದಲ್ಲಿ ಬರ್ತ್‌ಡೇ ಸೆಲೆಬ್ರೇಶನ್ ಮಾಡಿಕೊಂಡ ಕೊಲೆ ಆರೋಪಿ – ಫೋಟೋ ವೈರಲ್ ಆದ್ರೂ, ಅಧಿಕಾರಿಗಳು ಗಪ್ ಚುಪ್!

ನ್ಯೂಸ್ ಆ್ಯರೋ : ದುಡ್ಡು ಕೊಟ್ಟರೆ ಪರಪ್ಪನ ಅಗ್ರಹಾರದಲ್ಲಿ ಏನು ಬೇಕಿದ್ದರೂ ಮಾಡಬಹುದು ಎಂಬ ಮಾತಿಗೆ ಈಗಾಗಲೇ ಹಲವು ಸಾಕ್ಷ್ಯಗಳು ದೊರೆತಿವೆ. ಆದರೂ ಕೂಡ ಅಧಿಕಾರಿಗಳು ಎಚ್ಚೆತ್ತುಕೊಂಡಿರುವಂತೆ ಕಾಣುತ್ತಿಲ್ಲ. ಇದೀಗ ಪರಪ್ಪನ ಅಗ್ರಹಾರದಲ್ಲಿರುವ ಕೊಲೆ ಆರೋಪಿಯೊಬ್ಬ ಅದ್ದೂರಿಯಾಗಿ ಕೇಕ್ ಕತ್ತರಿಸಿ ಜೈಲಿನ ಒಳಗೆ ಬರ್ತ್‌ಡೇ ಸೆಲೆಬ್ರೇಶನ್ ಮಾಡಿಕೊಂಡಿದ್ದಾನೆ‌. ಈ ಫೋಟೋಗಳು ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಎಲ್ಲೆಡೆ ಜನಾಕ್ರೋಶ ಭುಗಿಲೆದ್ದಿದೆ.

ಜೈಲಿನಲ್ಲೇ ಸ್ಟೇಜ್, ಕೇಕ್‌ಕಟ್ಟಿಂಗ್, ಫೋಟೋಶೂಟ್!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರೌಡಿಗಳಿಗೆ, ಆರೋಪಿಗಳಿಗೆ ಕಡಿವಾಣ ಹಾಕುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಹೈಫೈ ವಿಲಾಸಿ ಜೀವನ, ಮಾದಕದ್ರವ್ಯ, ಮೊಬೈಲ್ ಹೀಗೆ ಹೊರ ಜಗತ್ತಿನಂತೆಯೇ ಜೈಲಿನಲ್ಲೂ ಪಾತಕಿಗಳಿಗೆ ಸಕಲ ಸೌಲಭ್ಯವಿದೆ.

ಈ ಮಾತಿಗೆ ಪುಷ್ಟಿ ನೀಡುವಂತೆ ಜೈಲಿನಲ್ಲಿರುವ ಆನಂದ್ ಎಂಬ ಕೊಲೆ ಆರೋಪಿಯೊಬ್ಬ ಇದೀಗ ಜೈಲಿನೊಳಗೆ ಸ್ಟೇಜ್ ಸಿದ್ಧ ಪಡಿಸಿ, ಕೇಕ್ ಕತ್ತರಿಸಿ ಬರ್ತ್ಡೆ ಅಚರಿಸಿದ್ದಲ್ಲದೇ ಫೋಟೋಶೂಟ್ ಮಾಡಿಸಿಕೊಂಡಿದ್ದಾನೆ. ಈತನ ಗೆಳೆಯರು ಹಾರಾ ಹಾಕಿ ಆರೋಪಿಗೆ ಶುಭಾಶಯ ತಿಳಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದೇ ಮೊದಲೇನಲ್ಲ!

ಪರಪ್ಪನ ಅಗ್ರಹಾರದಲ್ಲಿ ಇಂತಹ ಘಟನೆಗಳು ನಡೆಯುವುದು ಇದೇ ಮೊದಲೇನಲ್ಲ. ಈ‌ ಹಿಂದೆ ಹಲವು ಬಾರಿ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮೇಲಧಿಕಾರಿಗಳು ದಾಳಿ ನಡೆಸಿ ತಪಾಸಣೆ ಮಾಡಿದಾಗ ಕೈದಿಗಳ ಬಳಿ ಮೊಬೈಲ್‌ ಫೋನ್‌, ಗಾಂಜಾ ಮತ್ತಿತರ ವಸ್ತುಗಳು ಪತ್ತೆಯಾಗಿದ್ದವು. ಅದಾದ ಬಳಿಕ ಅಲ್ಲಿನ ನಿಯಮಗಳನ್ನು ಬಿಗಿ ಮಾಡಲಾಗಿತ್ತು.

ಆದರೂ ಈಗ ಇದೇ ರೀತಿಯ ಘಟನೆಗಳು ಮರುಕಳಿಸುತ್ತಿವೆ. ಇಷ್ಟೆಲ್ಲ ಘಟನೆಗಳು ನಡೆಯುತ್ತಿದ್ದರೂ ಕೂಡ ಅಧಿಕಾರಿಗಳು ಕೈ ಕಟ್ಟಿ ಕುಳಿತಿರುವುದು ವಿಪರ್ಯಾಸವೇ ಸರಿ. ಸದ್ಯ, ಜೈಲಿನಲ್ಲಿ ನಡೆದ ಬರ್ತ್ಡೆ ಫೋಟೋ ವೈರಲ್ ಆಗುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *