ದೇವಾಲಯದ ಹುಂಡಿಯಲ್ಲಿ ಪತ್ತೆಯಾಯ್ತು ಭಾರೀ ದುಡ್ಡು – ದೇವರ ಮೇಲೆ ಭಕ್ತಿಯಿಂದ ಈ ದುಡ್ಡು ಹಾಕಿದ್ದಲ್ಲ : ಏನಿದು ಘಟನೆ?

ದೇವಾಲಯದ ಹುಂಡಿಯಲ್ಲಿ ಪತ್ತೆಯಾಯ್ತು ಭಾರೀ ದುಡ್ಡು – ದೇವರ ಮೇಲೆ ಭಕ್ತಿಯಿಂದ ಈ ದುಡ್ಡು ಹಾಕಿದ್ದಲ್ಲ : ಏನಿದು ಘಟನೆ?

ನ್ಯೂಸ್ ಆ್ಯರೋ‌ : ಆರ್​ಬಿಐ 2 ಸಾವಿರ ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿದ್ದು, ಬದಲಿಸಿಕೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ದೇವಸ್ಥಾನದ ಕಾಣಿಕೆ ಹುಂಡಿಗೆ ಭಕ್ತರೊಬ್ಬರು 2 ಸಾವಿರ ಮುಖ ಬೆಲೆಯ ಬರೋಬ್ಬರಿ 8 ಲಕ್ಷ ರೂ. ದೇಣಿಗೆ ಹಾಕಿದ ಘಟನೆ ವರದಿಯಾಗಿದೆ.

ಕಂಗ್ರಾದಲ್ಲಿರುವ ಮಾ ಜ್ವಾಲಾ ದೇವಿ ದೇವಸ್ಥಾನದ ಕಾಣಿಕೆ ಹುಂಡಿಗೆ ವ್ಯಕ್ತಿ 2 ಸಾವಿರ ಮುಖಬೆಲೆಯ ಸುಮಾರು 400 ನೋಟುಗಳನ್ನು ಹಾಕಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಸುರೇಶ್​ ಕುಮಾರ್​, ಈ ಹಣವನ್ನು ಸಂಪೂರ್ಣವಾಗಿ ಭಕ್ತರ ಸೌಲಭ್ಯಕ್ಕೆ ಬಳಸಲಾಗುವುದು ಎಂದು ತಿಳಿಸಿದ್ದಾರೆ.

ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಆಗಾಗ್ಗೆ ಇಂತಹ ಕಾಣಿಕೆಗಳನ್ನು ನೀಡುತ್ತಿರುತ್ತಾರೆ. ಇಷ್ಟು ಮೊತ್ತದ ಹಣ ಬಂದಿದ್ದು ಇದೇ ಮೊದಲ ಸಲವೇನಲ್ಲ ಎಂದು ಅಧಿಕೃತರು ಮಾಹಿತಿ ನೀಡಿದ್ದಾರೆ.

ಕಂಗ್ರಾ ಜಿಲ್ಲಾ ಡಿಸಿಪಿ ನಿಪುನ್​ ಜಿಂದಾಲ್​ ಮಾತನಾಡಿ, ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ. ದೇವಾಲಯದ ಪ್ರದೇಶದ ಸುತ್ತ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *