
ವೇದಿಕೆಯಲ್ಲಿ ನೃತ್ಯ ಮಾಡುತ್ತಿರುವಾಗಲೇ ಕುಸಿದುಬಿದ್ದು ಕಲಾವಿದ ಸಾವು – ಹೃದಯ ವಿದ್ರಾವಕ ಘಟನೆಯ ವಿಡಿಯೋ ವೈರಲ್..!!
- ವೈರಲ್ ನ್ಯೂಸ್
- September 16, 2023
- No Comment
- 130
ನ್ಯೂಸ್ ಆ್ಯರೋ : ವೇದಿಕೆಯಲ್ಲಿ ನಾಟಕ ಪ್ರದರ್ಶನ ನೀಡುತ್ತಿದ್ದ ವೇಳೆ ಕಲಾವಿದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರದ, ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ.
ನಾಟಕ ಪ್ರದರ್ಶನದಲ್ಲಿ ಹಾಡೊಂದಕ್ಕೆ ನೃತ್ಯ ಮಾಡುವ ವೇಳೆ ದಿಢೀರ್ ಕುಸಿದು ಬಿದ್ದು ನಾಟಕದ ವೇದಿಕೆಯಲ್ಲೆ ಪಾತ್ರಧಾರಿ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಕಲಾವಿದ ಶರಣು ಬಾಗಲಕೋಟೆ (24) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ”ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ” ನಾಟಕ ಪ್ರದರ್ಶನ ವೇಳೆ ಈ ಘಟನೆ ನಡೆದಿದೆ. ಶರಣು ಬಾಗಲಕೋಟೆ ಇತ್ತೀಚೆಗೆ ಪೋಸ್ಟ್ಮ್ಯಾನ್ ಆಗಿ ನೇಮಕವಾಗಿದ್ದರು.
ಗ್ರಾಮ ದೇವರ ಜಾತ್ರೆ ಹಿನ್ನೆಲೆಯಲ್ಲಿ ನಾಟಕ ಹಮ್ಮಿಕೊಂಡಿದ್ದು, ರಾತ್ರಿ ಪ್ರದರ್ಶನ ನಡೆಯುತ್ತಿತ್ತು. ಈ ಕುರಿತು ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.