ಹಾವಿನ ಉಪಟಳದಿಂದ 16 ಸಾವಿರ ಜನರಿಗೆ ಕರೆಂಟ್ ‌ಮಿಸ್ – ಅಂಥಾದ್ದೇನಾಗಿತ್ತು ಗೊತ್ತಾ?

ಹಾವಿನ ಉಪಟಳದಿಂದ 16 ಸಾವಿರ ಜನರಿಗೆ ಕರೆಂಟ್ ‌ಮಿಸ್ – ಅಂಥಾದ್ದೇನಾಗಿತ್ತು ಗೊತ್ತಾ?

ನ್ಯೂಸ್ ಆ್ಯರೋ‌ : ಜಗತ್ತಿನಲ್ಲಿ ಪ್ರತಿಯೊಂದು ವ್ಯವಸ್ಥೆಯೂ ಒಂದಕ್ಕೊಂದು ಬೆಸೆದುಕೊಂಡಿರುತ್ತದೆ. ಆದ್ದರಿಂದಲೇ ಯಾವುದಾದರೂ ಒಂದು ಕಡೆ ಹೆಚ್ಚು ಕಡಿಮೆಯಾದರೆ ಒಂದಿಡೀ ಸಮೂಹವೇ ಅದರ ಪರಿಣಾಮವನ್ನು ಎದುರಿಸುತ್ತದೆ. ಇದಕ್ಕೆ ಉದಾಹರಣೆ ಇಲ್ಲಿದೆ. ವಿದ್ಯುತ್ ಇಲಾಖೆಯ ಸಬ್ ಸ್ಟೇಷನ್ ಗೆ ಹಾವೊಂದು ನುಗ್ಗಿದ ಕಾರಣ ಅಮೆರಿಕದ ಆಸ್ಟಿನ್ ನಗರದ ಸುಮಾರು 16,000 ಗ್ರಾಹಕರು ವಿದ್ಯುತ್ ಇಲ್ಲದೆ ಪರದಾಡುವಂತಾಗಿತ್ತು.

ಘಟನೆ ವಿವರ

ಹಾವೊಂದು ಸಬ್ ಸ್ಟೇಷನ್ ಗೆ ನುಗ್ಗಿತ್ತು. ಇದರಿಂದಾಗಿ ವಿದ್ಯುದ್ದೀಕರಿಸಿದ ಸರ್ಕ್ಯೂಟ್ ನೊಂದಿಗೆ ಸಂಪರ್ಕ ಸಾಧಿಸಿದಾಗ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು.

ಮೊದಲಿಗೆ ಸಮಸ್ಯೆ ಏನೆಂದು ಗೊತ್ತಾಗಿರಲಿಲ್ಲ. ಸಾಕಷ್ಟು ಪರಿಶೀಲನೆಯ ನಂತರ ಹಾವನ್ನು ಪತ್ತೆ ಹಚ್ಚಲಾಯಿತು. ಬಳಿಕ ವಿದ್ಯುತ್ ಸರಬರಾಜು ಎಂದಿನಂತೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಆರಂಭದಲ್ಲಿ ವಿದ್ಯುತ್ ಗ್ರಿಡ್ ನಲ್ಲಿ ಸಮಸ್ಯೆ ಉಂಟಾಗಿದೆ ಎಂದು ಭಾವಿಸಲಾಗಿತ್ತು. ಬಳಿಕ ಹಾವು ನುಗ್ಗಿದ ಪರಿಣಾಮ ವಿದ್ಯುತ್ ಸರಬರಾಜಿಗೆ ಅಡಚಣೆ ಉಂಟಾಗಿದೆ ಎಂದು ಕಂಡು ಹಿಡಿದು ಸಮಸ್ಯೆ ಬಗೆ ಹರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *