ಮೃತಪಟ್ಟಿದ್ದಾನೆ ಎಂದುಕೊಂಡಿದ್ದ ವ್ಯಕ್ತಿ ಸ್ಮಶಾನದಲ್ಲಿ ಎದ್ದು ಕುಳಿತ – ಘಟನೆ ನಡೆದದ್ದೆಲ್ಲಿ? ಏನಾಗಿತ್ತು‌ ಗೊತ್ತಾ?

ಮೃತಪಟ್ಟಿದ್ದಾನೆ ಎಂದುಕೊಂಡಿದ್ದ ವ್ಯಕ್ತಿ ಸ್ಮಶಾನದಲ್ಲಿ ಎದ್ದು ಕುಳಿತ – ಘಟನೆ ನಡೆದದ್ದೆಲ್ಲಿ? ಏನಾಗಿತ್ತು‌ ಗೊತ್ತಾ?

ನ್ಯೂಸ್ ಆ್ಯರೋ‌ : ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವಕ ಸತ್ತಿದ್ದಾನೆ ಎಂದುಕೊಂಡು ಮನೆಯವರು ಅಂತ್ಯ ಸಂಸ್ಕಾರ ನಡೆಸಲು ಮುಂದಾಗಿದ್ದರು. ಈ ವೇಳೆ ಆತನಿಗೆ ಎಚ್ಚರವಾಗಿ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮೊರೆನಾ ನಗರದ ವಾರ್ಡ್ 47ರ ಶಾಂತಿಧಾಮದ ಯುವಕ ಜೀತು ಪ್ರಜಾಪತಿ ಬಹಳ ದಿನಗಳಿಂದ ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಮೇ 30ರಂದು ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತು. ದೇಹದಲ್ಲಿ ಯಾವುದೇ ಚಲನವಲನ ಇಲ್ಲದ ಕಾರಣ ಸಂಬಂಧಿಕರು ಈತ ಮೃತಪಟ್ಟಿದ್ದಾನೆಂದು ಭಾವಿಸಿದ್ದರು.

ಹೀಗಾಗಿ ಸಂಬಂಧಿಕರು ಜೀತು ಅವರ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿ ಸ್ಮಶಾನಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಚಿತೆಯನ್ನು ಸಿದ್ಧಪಡಿಸಲಾಗಿತ್ತು. ಇನ್ನೇನು ಸ್ವಲ್ಪ ಹೊತ್ತಿನಲ್ಲಿ ಬೆಂಕಿ ಇಡಬೇಕು ಎನ್ನುವಷ್ಟರಲ್ಲಿ ಆತನ ದೇಹದಲ್ಲಿ ಚಲನವಲನ ಕಂಡು ಬಂತು.

ತಕ್ಷಣ ವೈದ್ಯರನ್ನು ಕರೆಸಲಾಯಿತು. ವೈದ್ಯರು ಪರೀಕ್ಷೆ ಮಾಡಿ ಇಸಿಜಿ ಮತ್ತು ಚಿಕಿತ್ಸೆಗಾಗಿ ಗ್ವಾಲಿಯರ್‌ಗೆ ಕರೆದೊಯ್ಯಲು ಸಲಹೆ ನೀಡಿದರು. ಸದ್ಯ ಆತನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *