ವಿಮಾನದಲ್ಲಿ ಫುಲ್ ಟೈಟಾಗಿ ಮಹಿಳೆ ಮೇಲೆಯೇ ಉಚ್ಚೆ ಹೊಯ್ದವನ ಮೇಲೆ ದಾಖಲಾಯ್ತು ಕೇಸ್ – ಘಟನೆಯ ಬಗ್ಗೆ ಏರ್ ಇಂಡಿಯಾ ಹೇಳಿದ್ದೇನು?

ವಿಮಾನದಲ್ಲಿ ಫುಲ್ ಟೈಟಾಗಿ ಮಹಿಳೆ ಮೇಲೆಯೇ ಉಚ್ಚೆ ಹೊಯ್ದವನ ಮೇಲೆ ದಾಖಲಾಯ್ತು ಕೇಸ್ – ಘಟನೆಯ ಬಗ್ಗೆ ಏರ್ ಇಂಡಿಯಾ ಹೇಳಿದ್ದೇನು?

ನ್ಯೂಸ್ ಆ್ಯರೋ : ನವದೆಹಲಿಗೆ ನ್ಯೂಯಾರ್ಕ್‍ನಿಂದ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸಹಪ್ರಯಾಣಿಕನೊರ್ವ ಕಂಠಪೂರ್ತಿ ಕುಡಿದು ಟೈಟಾಗಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿ, ಖಾಸಗಿ ಅಂಗ ಪ್ರದರ್ಶಿಸಿದ ಘಟನೆ ನಡೆದಿದೆ.

ನ್ಯೂಯಾರ್ಕ್‍ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ ವಿಮಾನ AI-102 ಸಂಚರಿಸುತ್ತಿತ್ತು. ಈ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್‍ನಲ್ಲಿ ಸಂಚರಿಸುತ್ತಿದ್ದ ಪುರುಷ ಪ್ರಯಾಣಿಕರೊಬ್ಬರು ಕುಡಿದ ಮತ್ತಿನಲ್ಲಿ ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದಾರೆ.

ಈ ಬಗ್ಗೆ ಮಹಿಳೆ ಕೂಡಲೇ ಏರ್ ಇಂಡಿಯಾ ವಿಮಾನದಲ್ಲಿದ್ದ ಸಿಬ್ಬಂದಿಗೆ ತಿಳಿಸಿದ್ದಾರೆ. ಸಿಬ್ಬಂದಿ ಬಂದು ವಿಚಾರಿಸುತ್ತಿದ್ದಂತೆ ಕುಡಿದ ಮತ್ತಿನಲ್ಲಿ ಏನು ಅರಿಯದವರಂತೆ ವರ್ತಿಸಿದ್ದಾರೆ.

ಘಟನೆ ಬಳಿಕ ಮಹಿಳೆ ಈ ಬಗ್ಗೆ ಟಾಟಾ ಸನ್ಸ್‌ ಗ್ರೂಪ್‌ನ ಮುಖ್ಯಸ್ಥ ನಟರಾಜನ್‌ ಚಂದ್ರಶೇಖರನ್‌ ಅವರಿಗೆ ಪತ್ರ ಬರೆದು ಘಟನೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ವಿಮಾನದ ಸಿಬ್ಬಂದಿ ಘಟನೆಯ ಬಳಿಕ ಈ ಬಗ್ಗೆ ಯಾವುದೇ ರೀತಿಯ ರೆಸ್ಪಾನ್ಸ್ ಮಾಡಿಲ್ಲ. ಇದರಿಂದ ವಿಮಾನದಲ್ಲಿ ಸಂಚರಿಸುವಾಗ ನಮ್ಮ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡುವಂತಾಗಿದೆ.

ಊಟದ ಬಳಿಕ ವಿಮಾನದ ಲೈಟ್ ಆಫ್ ಮಾಡಲಾಗಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ನನ್ನ ಸೀಟ್ ಬಳಿ ಬಂದು ಮೂತ್ರ ವಿಸರ್ಜಿಸಿದ್ದಾರೆ. ಈ ವೇಳೆ ಅವರ ಖಾಸಗಿ ಅಂಗವನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ‘ಘಟನೆ ಬಗ್ಗೆ ಇದೀಗ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದೆ.

Related post

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…

Leave a Reply

Your email address will not be published. Required fields are marked *