ಅದ್ಧೂರಿ ಮದುವೆಗೆ ವ್ಯವಸ್ಥೆ – ಆದ್ರೂ ರಾತ್ರಿಯಿಡಿ 28 ಕಿ.ಮೀ ನಡೆದು ಮದುವೆ ಮಂಟಪಕ್ಕೆ ಬಂದ ವರ– ಕುಟುಂಬದವರು : ಯಾಕೆ ಗೊತ್ತಾ..!?

ಅದ್ಧೂರಿ ಮದುವೆಗೆ ವ್ಯವಸ್ಥೆ – ಆದ್ರೂ ರಾತ್ರಿಯಿಡಿ 28 ಕಿ.ಮೀ ನಡೆದು ಮದುವೆ ಮಂಟಪಕ್ಕೆ ಬಂದ ವರ– ಕುಟುಂಬದವರು : ಯಾಕೆ ಗೊತ್ತಾ..!?

ನ್ಯೂಸ್‌ ಆ್ಯರೋ : ಒಡಿಶಾದ ಚಾಲಕರ ಮುಷ್ಕರದ ಪರಿಣಾಮ ವರ ಹಾಗೂ ಕುಟುಂಬದವರು ರಾತ್ರಿಯಿಡಿ ಕಾಲ್ನಡಿಗೆ ಮಾಡಿ ಮರುದಿನ ಬೆಳಿಗ್ಗೆ ವಧುನಿನ ಮನೆಗೆ ತಲುಪಿರುವ ಘಟನೆ ಒಡಿಶಾದ ರಾಯಗಡ ಜಿಲ್ಲೆಯಲ್ಲಿ ನಡೆದಿದೆ.

ಮದುವೆ ಎಂದರೆ ಸಂಭ್ರಮ. ವಧು, ವರರಿಗೆ ವಿಶೇಷ ದಿನವಾಗಿರುತ್ತದೆ. ವಿವಾಹದ ಕುರಿತಾಗಿ ಎಷ್ಟೋ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಇಲ್ಲೊಂದು ಕುಟುಂಬ ಮಗನ ಮದುವೆಯನ್ನು ಅದ್ಧೂರಿಯಾಗಿ ಮಾಡಲು ಎಲ್ಲಾ ವ್ಯವಸ್ಥೆ ಮಾಡಿತ್ತಾದರೂ ಚಾಲಕರ ಮುಷ್ಕರದ ಪರಿಣಾಮ ಎಲ್ಲವೂ ಅಂದುಕೊಂಡತ್ತೆ ನಡೆದಿಲ್ಲ.

ಒಡಿಶಾದ ರಾಯಗಡ ಜಿಲ್ಲೆಯ ವಧುವಿನ ಗ್ರಾಮಕ್ಕೆ ಮದುವೆಗಾಗಿ ವರ ನರೇಶ್ ಪ್ರಾಸ್ಕಾ ಮತ್ತು ಅವರ ಕುಟುಂಬ ಮದುವೆಯ ಅದ್ಧೂರಿ ಮೆರವಣಿಗೆಗಾಗಿ 4 ಕಾರು ವ್ಯವಸ್ಥೆ ಮಾಡಿದ್ದರು. ಆದರೆ ವರ ಹಾಗೂ ಆತನ ಕುಟುಂಬ ಸುಮಾರೂ 28 ಕಿ.ಮೀ ಅಂದರೆ ರಾತ್ರೀ ಪೂರ್ತಿ ನಡೆದು ಮರುದಿನ ಮುಂಜಾನೆ ವಧುವಿನ ಮನೆಗೆ ತಲುಪಿದ್ದಾರೆ.

ಒಡಿಶಾದಲ್ಲಿ ಚಾಲಕರ ಮುಷ್ಕರ ನಡೆಯುತ್ತಿದ್ದ ಕಾರಣದಿಂದಾಗಿ ವಾಹನ ವ್ಯವಸ್ಥೆಗೆ ತಡೆಯಾಗಿದೆ. ವಿಮೆ, ಪಿಂಚಣಿ, ಕಲ್ಯಾಣ ಮಂಡಳಿ ರಚನೆ ಮತ್ತಿತರ ಸಮಾಜ ಕಲ್ಯಾಣ ಕ್ರಮಗಳಿಗೆ ಆಗ್ರಹಿಸಿ ಚಾಲಕ ಏಕತಾ ಮಹಾಸಂಘ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿತ್ತು. ಇದುವೇ ಈ ವರನ ಕುಟುಂಬಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ವರನ ಕುಟುಂಬದ ಸದಸ್ಯರು ರಾತ್ರಿಯಲ್ಲಿ ನಡೆದುಕೊಂಡು ಹೋಗುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *