ಅಬುಧಾಬಿ ಲಾಟರಿಯಲ್ಲಿ ಬರೋಬ್ಬರಿ 45 ಕೋಟಿ ರೂ. ಗೆದ್ದ ಕೇರಳದ ನರ್ಸ್ – ಗೆದ್ದ ಹಣದಲ್ಲಿ ದಾನ ಮಾಡೋಕೆ ಮುಂದಾದ ಕುಟುಂಬ..!!

ಅಬುಧಾಬಿ ಲಾಟರಿಯಲ್ಲಿ ಬರೋಬ್ಬರಿ 45 ಕೋಟಿ ರೂ. ಗೆದ್ದ ಕೇರಳದ ನರ್ಸ್ – ಗೆದ್ದ ಹಣದಲ್ಲಿ ದಾನ ಮಾಡೋಕೆ ಮುಂದಾದ ಕುಟುಂಬ..!!

ನ್ಯೂಸ್ ಆ್ಯರೋ‌ : ಕೇರಳ ಮೂಲದ ನರ್ಸ್ ಒಬ್ಬರಿಗೆ ಅಬುಧಾಬಿಯ ಬಿಗ್ ಟಿಕೆಟ್ ಲಾಟರಿಯಲ್ಲಿ ಬಹುಮಾನ ಬಂದಿದ್ದು, ಬರೋಬ್ಬರಿ 45 ಕೋಟಿ ರೂ. ಅವರ ಕೈ ಸೇರಲಿದೆ ಎಂದು ಮೂಲಗಳು ತಿಳಿಸಿವೆ.

ಶನಿವಾರ ನಡೆದ ಬಿಗ್ ಟಿಕೆಟ್ ಡ್ರಾದಲ್ಲಿ ಲವ್ಲಿ ಮೋಲ್ ಅಚ್ಚಮ್ಮ ಈ ಬಹುಮಾನ ಗೆದ್ದುಕೊಂಡಿದ್ದಾರೆ. ಅವರು ಸುಮಾರು 21 ವರ್ಷಗಳಿಂದ ತಮ್ಮ ಕುಟುಂಬದೊಂದಿಗೆ ಅಬುಧಾಬಿಯಲ್ಲಿ ನೆಲೆಸಿದ್ದಾರೆ.

ಇವರ ಪತಿ ಪ್ರತಿ ತಿಂಗಳು ಅಬುದಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಾಟರಿ ಖರೀದಿಸುತ್ತಿದ್ದರು ಎಂದು ಹೇಳಲಾಗಿದೆ. ಅನೇಕ ಪ್ರಯತ್ನದ ಫಲವಾಗಿ ಇದೀಗ ಈ ಭಾರೀ ಮೊತ್ತ ಅವರಿಗೆ ಲಭಿಸಿದೆ.

ದಾನ ಮಾಡುವುದಾಗಿ ಘೋಷಣೆ

ಬಹುಮಾನ ಮೊತ್ತದ ಪೈಕಿ ಒಂದು ಭಾಗವನ್ನು ಕುಟುಂಬದ ಇತರ ಸದಸ್ಯರಿಗೆ ನೀಡುವುದಾಗಿ ಲವ್ಲಿ ಹೇಳಿದ್ದಾರೆ. ಇನ್ನುಳಿದಂತೆ ಮಕ್ಕಳ ಶಿಕ್ಷಣಕ್ಕೆ ಒಂದಷ್ಟು ಹಣ ಬಳಸಿಕೊಂಡು ಉಳಿದಿದ್ದನ್ನು ದಾನ ಮಾಡುವುದಾಗಿ ಅವರು ತಿಳಿಸಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *