ತುಲಾಭಾರದ ವೇಳೆ ಕುಸಿದ ತಕ್ಕಡಿ, ಪೇಜಾವರ ಶ್ರೀಗಳಿಗೆ ಗಾಯ – ವೈರಲ್ ಆಗುತ್ತಿದೆ ಅವಘಡದ ವಿಡಿಯೋ..!

ತುಲಾಭಾರದ ವೇಳೆ ಕುಸಿದ ತಕ್ಕಡಿ, ಪೇಜಾವರ ಶ್ರೀಗಳಿಗೆ ಗಾಯ – ವೈರಲ್ ಆಗುತ್ತಿದೆ ಅವಘಡದ ವಿಡಿಯೋ..!

ನ್ಯೂಸ್ ಆ್ಯರೋ : ತುಲಾಭಾರ ಮಾಡುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು, ತಕ್ಕಡಿಯ ಹಗ್ಗ ಕಳಚಿಬಿದ್ದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಚಾತುರ್ಮಾಸ ಮುಕ್ತಾಯದ ಬಳಿಕ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ದೆಹಲಿಯ ಮಠಕ್ಕೆ ಭೇಟಿ ನೀಡಿದ್ದರು. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ ಅದ್ದೂರಿ ಕಾರ್ಯಕ್ರಮಗಳು ಏರ್ಪಾಟಾಗಿವೆ.

ಒಟ್ಟು ಐದು ದಿನಗಳ ಕಾರ್ಯಕ್ರಮದಲ್ಲಿ ನಾನಾ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬುಧವಾರ, ಶಿಷ್ಯರೆಲ್ಲಾ ಸೇರಿ ಪೇಜಾವರ ಶ್ರೀಗಳಿಗೆ ತುಲಾಭಾರ ಏರ್ಪಡಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ತಕ್ಕಡಿ ಕುಸಿದು, ತಕ್ಕಡಿಯ ಮೇಲ್ಭಾಗ ಶ್ರೀಗಳ ತಲೆಯ ಮೇಲೆ ಉರುಳಿದೆ. ಆತಂಕಗೊಂಡ ಭಕ್ತರು ಸುತ್ತುವರಿಯುತ್ತಿದ್ದಂತೆ, ಕೈ ಸನ್ನೆಯ ಮೂಲಕ ಸ್ವಾಮೀಜಿ ತಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸದ್ಯ ತಕ್ಕಡಿ ಕುಸಿದು ಬಿದ್ದ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತದೆ. ನಯೋಲಿನ್ ಹಗ್ಗದ ಮೂಲಕ ತಕ್ಕಡಿಯನ್ನು ಕಟ್ಟಿರುವುದರಿಂದ ಶಿಥಿಲಗೊಂಡ ಹಗ್ಗ ತುಂಡಾಗಿ ಬಿದ್ದಿರುವ ಸಾಧ್ಯತೆ ಇದೆ. ಭೂಮಟ್ಟದಿಂದ ಸ್ವಲ್ಪವೇ ಎತ್ತರದಲ್ಲಿ ತಕ್ಕಡಿ ಇದ್ದ ಕಾರಣ ಪೇಜಾವರ ಶ್ರೀಗಳಿಗೆ ಕುಸಿದು ಬಿದ್ದು ಯಾವುದೇ ಅಡ್ಡಿಯಾಗಿಲ್ಲ‌. ಆದರೆ ತಲೆಯ ಭಾಗಕ್ಕೆ ಗಾಯವಾಗಿದೆ.
ತುಲಾಭಾರ ಮುಗಿಯುತ್ತಿದ್ದಂತೆ ಸುಧಾರಿಸಿಕೊಂಡ ಶ್ರೀಗಳು, ನಂತರ ಎರಡು ದಿನಗಳ ಕಾಲ ನಿರಂತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *