
ಅಕ್ರಮ ವಿದ್ಯುತ್ ಸಂಪರ್ಕ, ವಿದ್ಯುತ್ ಕಳವು ಆರೋಪ – ಬೆಸ್ಕಾಂಗೆ ಹೆಚ್.ಡಿ ಕುಮಾರಸ್ವಾಮಿ ಪಾವತಿಸಿದ ದಂಡದ ಮೊತ್ತವೆಷ್ಟು ಗೊತ್ತಾ?
- ವೈರಲ್ ನ್ಯೂಸ್
- November 17, 2023
- No Comment
- 78
ನ್ಯೂಸ್ ಆ್ಯರೋ : ದೀಪಾವಳಿಯ ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂ. ದಂಡದ ಮೊತ್ತವನ್ನು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಪಾವತಿಸಿದ್ದಾರೆ.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕುಮಾರಸ್ವಾಮಿ, ಬೆಸ್ಕಾಂ 2.5 ಕಿಲೋ ವ್ಯಾಟ್ಗೆ ಲೆಕ್ಕ ತೆಗೆದುಕೊಂಡಿದೆ.
7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. ಬೆಸ್ಕಾಂ ಪ್ರಕಾರ, 2,526 ರೂ. ಬಿಲ್ ಬರಬೇಕಿತ್ತು. ಆದರೆ, 68,526 ರೂ. ಕರೆಂಟ್ ಬಿಲ್ ನೀಡಿದೆ.
ಹೀಗಾಗಿ ಕರೆಂಟ್ ಬಿಲ್ ಬಗ್ಗೆ ಪುನರ್ ಪರಿಶೀಲನೆ ಮಾಡಲು ಹೇಳಿದ್ದಾಗಿ ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗುತ್ತಲೇ ಕಾಂಗ್ರೆಸ್ ನ ಮುಖಂಡರು ಕುಮಾರಸ್ವಾಮಿ ಮೇಲೆ ಮುಗಿಬಿದ್ದಿದ್ದರು.