ಕಲಬುರ್ಗಿ : ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ದಾದಾಗಿರಿ – ಕಾಲಿಗೆ ಗುಂಡು ಹಾರಿಸಿ ಆರೋಪಿಯ ಸೊಕ್ಕು ಮುರಿದ ಪಿಎಸ್ಐ : ವಿಡಿಯೋ ವೈರಲ್…!!

ಕಲಬುರ್ಗಿ : ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ದಾದಾಗಿರಿ – ಕಾಲಿಗೆ ಗುಂಡು ಹಾರಿಸಿ ಆರೋಪಿಯ ಸೊಕ್ಕು ಮುರಿದ ಪಿಎಸ್ಐ : ವಿಡಿಯೋ ವೈರಲ್…!!

ನ್ಯೂಸ್ ಆ್ಯರೋ‌ : ಕಲಬುರ್ಗಿಯ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಜನರೆಲ್ಲರ ಮಧ್ಯೆ ಕೈಯ್ಯಲ್ಲಿ ಕತ್ತಿ ಝಳಪಿಸಿದ್ದಲ್ಲದೆ ಸ್ಥಳಕ್ಕೆ ಧಾವಿಸಿದ ಪೊಲೀಸರ ಎದುರೇ ದಾದಾಗಿರಿ ತೋರಿದವನನ್ನು ಕೊನೆಗೆ ಪೊಲೀಸರು ಶೂಟ್ ಮಾಡಿ ಬೆಂಡೆತ್ತಿದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಕಲಬುರಗಿಯ ಸೂಪರ್​ ಮಾರುಕಟ್ಟೆ ಪ್ರದೇಶದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಪ್ಯಾಂಟ್​-ಬನಿಯನ್ ತೊಟ್ಟು ಮಾರಕಾಸ್ತ್ರ ಹಿಡಿದು ಸುಮಾರು ಒಂದು ಗಂಟೆಯಿಂದ ಜನರಲ್ಲಿ ಭೀತಿ ಹುಟ್ಟಿಸಿದ್ದ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು.

ಹಾಗೆ ಬಂದ ಪೊಲೀಸರು ಆತನಿಗೆ ಶರಣಾಗುವಂತೆ ಸೂಚಿಸಿದರೂ ಆತ ಕ್ಯಾರೇ ಎಂದಿರಲಿಲ್ಲ. ಪೊಲೀಸರು ಬುದ್ಧಿಮಾತು ಹೇಳಿದರೂ ಅವರ ವಿರುದ್ಧವೇ ಮಾರಕಾಸ್ತ್ರವನ್ನು ಝಳಪಿಸಿ, ದಾದಾಗಿರಿ ತೋರಿದ್ದ. ಕೊನೆಗೆ ಪೊಲೀಸರು ವಿಧಿ ಇಲ್ಲದೆ ಅವನತ್ತ ಗುಂಡು ಹಾರಿಸಿದ್ದಲ್ಲದೆ, ಕಾಲಿಗೆ ಗುಂಡು ಹೊಡೆದಿದ್ದಾರೆ.

ಪೊಲೀಸರ ಮೇಲೆ ದಾಳಿ ಮಾಡಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಪಿಎಸ್​ಐ ವಾಹಿದ್ ಕೊತ್ವಾಲ್ ಅವರು ಆರೋಪಿಯ ಕಾಲಿಗೆ ಮೂರು ಸುತ್ತು ಗುಂಡು ಹಾರಿಸಿದ್ದು, ಮೂರನೇ ಗುಂಡು ಆತನ‌ ಕಾಲಿಗೆ ಬಿದ್ದಾಗ ಆತ ನೆಲಕ್ಕುರುಳಿದ್ದಾನೆ. ಕೂಡಲೇ ಆತನ ಮೇಲೆ ಇತರ ಪೊಲೀಸರು ಲಾಠಿ ಬೀಸಿ ಬೆಂಡೆತ್ತಿದ್ದು, ಬಳಿಕ ವಶಕ್ಕೆ ಪಡೆದು ಚಿಕಿತ್ಸೆ ನೀಡಲಾಗಿದೆ. ಆರೋಪಿ ಅಬ್ದುಲ್ ಜಾಫರ್ ಎಂದು ಗುರುತಿಸಲಾಗಿದ್ದು, ಆತ ಯಾಕೆ ಹೀಗೆ ವರ್ತಿಸಿದ್ದ ಎನ್ನುವ ಬಗ್ಗೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *