Viral Video : ಸಬ್ ಇನ್ಸ್‌ಪೆಕ್ಟರ್ ಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಗೂಸಾ – ವಿಡಿಯೋ ವೈರಲ್, ಐವರು ಆರೋಪಿಗಳ ಬಂಧನ

Viral Video : ಸಬ್ ಇನ್ಸ್‌ಪೆಕ್ಟರ್ ಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಗೂಸಾ – ವಿಡಿಯೋ ವೈರಲ್, ಐವರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಪ್ರತಿಭಟನಾನಿರತ ಗುಂಪೊಂದು ಸಬ್‌ ಇನ್ಸ್ ಪೆಕ್ಟರ್‌ ಒಬ್ಬರನ್ನು ರಸ್ತೆಯಲ್ಲೇ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಸೋಮವಾರ(ಅ.31 ರಂದು) ನಡೆದಿದೆ.

ಉತ್ತರಪ್ರದೇಶ ಪೊಲೀಸ್‌ನ ಸಬ್-ಇನ್ಸ್‌ಪೆಕ್ಟರ್ (ಎಸ್‌ಐ) ರಾಮ್ ಅವತಾರ್ ಅವರಿಗೆ ಗುಂಪೊಂದು ಥಳಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಹೋಬಾದ ಪನ್ವಾರಿ ಪ್ರದೇಶದಲ್ಲಿ 13 ವರ್ಷದ ಬಾಲಕ ಬಸ್ಸಿನಡಿ ಸಿಲುಕಿ ಸಾವನ್ನಪ್ಪಿದ್ದ. ಇದಕ್ಕೆ ಸಂಬಂಧಿಸಿ ಮೃತನ ಬಾಲಕನ ಸಂಬಂಧಿಗಳು ಹಾಗೂ ಕೆಲ ಸ್ಥಳೀಯರು ರಸ್ತೆಯಲ್ಲಿ ನಿಂತು ಚಾಲಕನ ವಿರುದ್ಧ ಕ್ರಮಕ್ಕೆ ಹಾಗೂ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆಯ ಕಾರಣದಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಟ್ರಾಫಿಕ್‌ ಕ್ಲಿಯರ್‌ ಮಾಡಲು ಸ್ಥಳಕ್ಕೆ ಸಬ್-ಇನ್ಸ್‌ಪೆಕ್ಟರ್ ರಾಮ್ ಅವತಾರ್ ತನ್ನ ತಂಡದೊಂದಿಗೆ ಆಗಮಿಸಿದ್ದರು. ಈ ವೇಳೆ ಎಸ್‌ ಐ ಹಾಗೂ ಮೃತ ಬಾಲಕನ ಸಂಬಂಧಿಕರ ನಡುವ ಮಾತಿನ ಚಕಮಕಿ ಉಂಟಾಗಿದ್ದು, ಮೊದಲೇ ಸಿಟ್ಟಲಿದ್ದ ಜನ ಸಬ್-ಇನ್ಸ್‌ಪೆಕ್ಟರ್ ರಾಮ್ ಅವತಾರ್ ಅವರ ಮೇಲೆ ಹಲ್ಲೆ ಮಾಡಲು ಶುರು ಮಾಡಿದ್ದಾರೆ.

ರಾಮ್‌ ಅವತಾರ್‌ ಅವರಿಗೆ ಮೊದಲು ಕಪಾಳ ಮೋಕ್ಷ ಮಾಡಿದ್ದು, ಬಳಿಕ ಒದ್ದು, ಕೋಲುಗಳಿಂದ ಹಲ್ಲೆ ಮಾಡಿದ್ದಾರೆ.
ಘಟನಾ ಸ್ಥಳದಲ್ಲಿದ್ದ ಇತರ ಮೂವರು ಪೊಲೀಸರು ಅಲ್ಲಿಂದ ಓಡಿಹೋಗಿದ್ದಾರೆ. ಇದಾದ ಬಳಿಕ ಘಟನಾ ಸ್ಥಳಕ್ಕೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಮತ್ತು ಪ್ರದೇಶದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಸ್ಥಳಕ್ಕೆ ಆಗಮಿಸಿ ಗುಂಪನ್ನು ಶಾಂತಗೊಳಿಸಿದ್ದು ನಂತರ ರಾಮ್ ಅವತಾರ್ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಇಬ್ಬರು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *