ವಕೀಲನ ಜೊತೆ ರೆಡ್ ಹ್ಯಾಂಡ್ ಆಗಿ‌ ಸಿಕ್ಕಿಬಿದ್ದ ವಿವಾಹಿತೆ ಕಾನ್ಸ್‌ಟೇಬಲ್ – ವಿಡಿಯೋ ಮಾಡಿ ಜಾಲತಾಣದಲ್ಲಿ ಶೇರ್ ಮಾಡಿದ ಪತಿ, ವಿಡಿಯೋ ವೈರಲ್..!!

ವಕೀಲನ ಜೊತೆ ರೆಡ್ ಹ್ಯಾಂಡ್ ಆಗಿ‌ ಸಿಕ್ಕಿಬಿದ್ದ ವಿವಾಹಿತೆ ಕಾನ್ಸ್‌ಟೇಬಲ್ – ವಿಡಿಯೋ ಮಾಡಿ ಜಾಲತಾಣದಲ್ಲಿ ಶೇರ್ ಮಾಡಿದ ಪತಿ, ವಿಡಿಯೋ ವೈರಲ್..!!

ನ್ಯೂಸ್ ಆ್ಯರೋ‌: ಪರಪುರುಷನ ಜತೆ ವಿವಾಹೇತರ ಸಂಬಂಧ ಹೊಂದಿದ್ದ ತನ್ನ ಪತ್ನಿಯನ್ನು ವ್ಯಕ್ತಿಯೊಬ್ಬ ಪೊಲೀಸರ ಸಹಾಯದಿಂದ ರೆಡ್​ಹ್ಯಾಂಡ್​ ಆಗಿ ಹಿಡಿದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಸದ್ಯ ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಾನ್ಪುರ ಮೂಲದ ಮಹಿಳೆ, ವಕೀಲನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಳು. ಆಕೆಯನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದ ಪತಿ ಅದನ್ನು ವೀಡಿಯೋ ರೆಕಾರ್ಡ್​ ಮಾಡಿ, ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ವೀಡಿಯೋ ರೆಕಾರ್ಡ್​ ಮಾಡುವುದನ್ನು ನೋಡಿದ ಮಹಿಳೆ ನಿಮ್ಮ ಫೋಟೋಗ್ರಫಿ ಮುಗಿಯಿತಾ? ನೀವಿನ್ನೂ ಹೋಗಬಹುದು ಎಂದಿರುವುದು ಕೂಡ ದಾಖಲಾಗಿದೆ.

ಈ ಮಹಿಳೆಯು ಪೊಲೀಸ್​ ಕಾನ್ಸ್​ಟೆಬಲ್​ ಆಗಿದ್ದು, ಸರ್ಕಾರಿ ಕ್ವಾಟ್ರಸ್​ನಲ್ಲಿ ವಾಸವಿದ್ದಾರೆ. ಅದೇ ನಿವಾಸದಲ್ಲಿ ವಕೀಲನೊಂದಿಗೆ ಸಿಕ್ಕಿಬಿದ್ದಿದ್ದಾರೆ. ಆಕೆಯ ಪತಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯಲ್ಲಿ ಸೇವೆ ಸಲ್ಲಿಸುತ್ತಿರುವ ಇನ್ನೊಬ್ಬ ಕಾನ್ಸ್ಟೇಬಲ್ ಎನ್ನಲಾಗಿದೆ. ಪ್ರಸ್ತುತ ಆಕೆಯನ್ನು ಫ್ಯಾಮಿಲಿ ಕೌನ್ಸಿಲಿಂಗ್ ಸೆಂಟರ್‌ನಲ್ಲಿ ನಿಯೋಜನೆಗೊಳಿಸಲಾಗಿದೆ.

ಮಹಿಳಾ ಕಾನ್ಸ್​ಟೆಬಲ್ ಪ್ರಸ್ತುತ ತನ್ನ ಪತಿಯೊಂದಿಗೆ ವಿಚ್ಛೇದನ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದಾಳೆ. ವಕೀಲನ ಜೊತೆ ಆಕೆ ಲಿವಿಂಗ್​ ಟುಗೆದರ್ ಸಂಬಂಧದಲ್ಲಿದ್ದಾಳೆ ಎಂದು ವರದಿಯಾಗಿದೆ. ಸದ್ಯಕ್ಕೆ ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ ಮತ್ತು ಇಬ್ಬರನ್ನೂ ಬಿಡುಗಡೆ ಮಾಡಲಾಯಿತು. ಆದರೆ ಪೊಲೀಸ್ ಇಲಾಖೆಗೆ ಕಳಂಕ ತಂದಿರುವ ಆಕೆಯ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿ ಪತ್ರ ಬರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *