ಕೊಹ್ಲಿಯ ಭರ್ಜರಿ ಸೆಂಚುರಿಗೆ ಹಲವು ದಾಖಲೆಗಳು ಉಡೀಸ್; ಈ ಭಾರತೀಯ ಆಟಗಾರರ ಪಟ್ಟಿಯಲ್ಲಿ ಹೆಸರು ಪಡೆದ ವಿರಾಟ್

Virat Kohli
Spread the love

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 143 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 100 ರನ್ ಬಾರಿಸಿದರು.

ಈ ಭರ್ಜರಿ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿ ಹಲವು ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ಟೆಸ್ಟ್ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ 6 ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಇದೀಗ 7ನೇ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಜಾಕ್ ಹಾಬ್ಸ್​ (9) ಹೆಸರಿನಲ್ಲಿತ್ತು. ಇದೀಗ ಆಸ್ಟ್ರೇಲಿಯಾದಲ್ಲಿ 10ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ಅತ್ಯಧಿಕ ಶತಕ ಬಾರಿಸಿದ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಈ ಮೈದಾನದಲ್ಲಿ ಎರಡನೇ ಸೆಂಚುರಿ ಪೂರೈಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಈ ಭರ್ಜರಿ ಸೆಂಚುರಿಯೊಂದಿಗೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 30 ಅಥವಾ ಅದಕ್ಕಿಂತ ಹೆಚ್ಚು ಶತಕಗಳನ್ನು ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (51), ರಾಹುಲ್ ದ್ರಾವಿಡ್ (36) ಮತ್ತು ಸುನಿಲ್ ಗವಾಸ್ಕರ್ (34) ಮೊದಲ ಮೂರು ಸ್ಥಾನಗಳಲ್ಲಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!