ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿ ಆರು ಜಿಲ್ಲೆಗಳಲ್ಲಿ ಜುಲೈ 14,15 ರಂದು ರೆಡ್ ಅಲರ್ಟ್ – ಮಳೆಯ ಜೊತೆ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಎಂದ ಹವಾಮಾನ ಇಲಾಖೆ
ನ್ಯೂಸ್ ಆ್ಯರೋ : ಸದ್ಯಕ್ಕಂತೂ ಕರಾವಳಿಯಲ್ಲಿ ಮಳೆಯ ಅಬ್ಬರ ಕಮ್ಮಿಯಾಗೋ ಲಕ್ಷಣಗಳು ಕಾಣಿಸುತ್ತಿಲ್ಲ. ಮೋಡ ಕವಿದ ವಾತಾವರಣ ಇರುವಂತೆಯೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಂದಿನ 2 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಜುಲೈ 14 ಹಾಗೂ 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಇದೇ ಜಿಲ್ಲೆಗಳಿಗೆ ಜುಲೈ 16, 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರೆ, ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಜುಲೈ17ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಜುಲೈ 16ರ ವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿದ್ದು, ಭಾನುವಾರ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯ ವೇಗವು 40-50 ಕಿ.ಮೀ. ತಲುಪುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
Leave a Comment