ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊಲೆಗೆ ಪ್ರಚೋದಿಸಿ ಪೋಸ್ಟ್ – ವಿದ್ಯಾರ್ಥಿನಿ ಕೀರ್ತಿ ಶರ್ಮಾ ಅರೆಸ್ಟ್

20240819 151632
Spread the love

ನ್ಯೂಸ್ ಆ್ಯರೋ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಮತ್ತು ಕೊಲೆ ಬೆದರಿಕೆ ಹಾಕುವ ಪೋಸ್ಟ್‌ ಮಾಡಿದ್ದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ‌.

ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಈಕೆ ತನ್ನ kirtisocial ಎಂಬ ತನ್ನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಹತ್ಯೆಗೆ ಕರೆ ನೀಡಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಹತ್ಯೆಯನ್ನು ನೆನಪಿಸುವ ರೀತಿಯಲ್ಲಿ ಮಮತಾ ಬ್ಯಾನರ್ಜಿಯನ್ನು ಹತ್ಯೆ ಮಾಡಿ ಎಂದು ಪೋಸ್ಟ್‌ ಮಾಡಿದ್ದಾಳೆ ಎನ್ನಲಾಗಿದೆ.

ಕೀರ್ತಿ ಶರ್ಮಾ ವಿರುದ್ಧ ತಾಲ್ತಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯನ್ನು ಅರೆಸ್ಟ್‌ ಮಾಡಲಾಗಿದೆ. ಕೀರ್ತಿ ಒಟ್ಟು ಮೂರು ಪೋಸ್ಟ್‌ಗಳನ್ನು ಮಾಡಿದ್ದು, ಒಂದು ಪೋಸ್ಟ್‌ನಲ್ಲಿ ಮೃತ ವೈದ್ಯೆಯ ಗುರುತು ಬಹಿರಂಗ ಪಡಿಸಿದ್ದಾರೆ. ಮತ್ತೆರಡು ಪೋಸ್ಟ್‌ನಲ್ಲಿ ಮಮತಾ ಬ್ಯಾನರ್ಜಿಯವರಿಗೆ ಬೆದರಿಕೆಯೊಡ್ಡಿದ್ದಾರೆ ಎಂದು ಪೊಲೀಸರು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆ ಸಾವಿಗೆ ನ್ಯಾಯ ಸಿಗಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಮಧ್ಯ ಪ್ರವೇಶ ಮಾಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಇರುವ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ.

Leave a Comment

Leave a Reply

Your email address will not be published. Required fields are marked *

error: Content is protected !!