ದರ್ಶನ್‌ಗೆ ಇನ್ನೂ ಆಪರೇಷನ್‌ ಮಾಡಿಲ್ಲ ಯಾಕೆ?; ಹೈಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಏನಿದೆ?

New Project 13
Spread the love

ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ ಅವರು ಇನ್ನೂ ಮಾನಸಿಕವಾಗಿ ಸಿದ್ಧವಾಗದ ಕಾರಣ ಶಸ್ತ್ರಚಿಕಿತ್ಸೆ ನಡೆಸಿಲ್ಲ ಎಂದು ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಅನಾರೋಗ್ಯದ ಕಾರಣ ನೀಡಿದ ದರ್ಶನ್‌ ಅವರಿಗೆ ಹೈಕೋರ್ಟ್‌ 6 ವಾರಗಳ ಜಾಮೀನು ನೀಡಿತ್ತು. ಜಾಮೀನು ನೀಡಿದರೂ ದರ್ಶನ್‌ ಅವರಿಗೆ ಇನ್ನೂ ಶಸ್ತ್ರಚಿಕಿತ್ಸೆ ನಡೆದಿಲ್ಲ. ಹೀಗಾಗಿ ಶಸ್ತ್ರ ಚಿಕಿತ್ಸೆ ಯಾಕೆ ನಡೆದಿಲ್ಲ ಎಂಬ ಪ್ರಶ್ನೆಗೆ ದರ್ಶನ್‌ ಪರ ವಕೀಲರು ಆರೋಗ್ಯಕ್ಕೆ ಸಂಬಂಧಿಸಿದ ವರದಿಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.

ಇನ್ನು ದರ್ಶನ್‌ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡುವುದಕ್ಕೆ ತಯಾರಿ ಮಾಡಲಾಗುತ್ತಿದೆ. ದರ್ಶನ್ ಕೂಡ ಶಸ್ತ್ರಚಿಕಿತ್ಸೆಗೆ ತಯಾರಾಗುತ್ತಿದ್ದಾರೆ. ಆದರೆ ಅತಿಯಾದ ರಕ್ತದೊತ್ತಡ ಸಮಸ್ಯೆ ಎದುರಾಗಿದೆ. ಆಪರೇಷನ್‌ ಮಾಡಬೇಕಾದರೆ ರಕ್ತದೊತ್ತಡ ಸಮತೋಲನ ಆಗಿರಬೇಕು.

ದರ್ಶನ್ ರಕ್ತದೊತ್ತಡದ ಸಮಸ್ಯೆ ಸಮತೋಲನಕ್ಕೆ ಬರುತ್ತಿಲ್ಲ. ಇನ್ನೂ ದರ್ಶನ್ ಕೂಡ ಶಸ್ತ್ರ ಚಿಕಿತ್ಸೆಗೆ ಮಾನಸಿಕವಾಗಿ ಸಿದ್ದರಾಗಬೇಕಿದೆ. ಸದ್ಯಕ್ಕೆ ಕನ್ಸರ್ವೇಟಿವ್ ಚಿಕಿತ್ಸೆ ಮುಂದುವರೆದಿದೆ. ಫಿಸಿಯೋಥೆರಪಿ ಮತ್ತು ಔಷಧಗಳಿಂದ ಸಮಸ್ಯೆ ನಿಯಂತ್ರಣದಲ್ಲಿಡುವ ಪ್ರಯತ್ನ ನಡೆಯುತ್ತಿದೆ.

ದರ್ಶನ್​ ಸರ್ಜರಿ ಡೇಟ್​ ನಿಗದಿಯಾಗಿಲ್ಲ ಯಾಕೆ ?:
ವಾದ ಮಂಡಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ದರ್ಶನ್ ಅವರಿಗೆ 6 ವಾರಗಳ ಷರತ್ತಿನ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ. ಅದರೆ ಸರ್ಜರಿ ದಿನಾಂಕವನ್ನು ತಿಳಿಸಲಿಲ್ಲವೆಂದು ಎಸ್ ಪಿಪಿ ಪ್ರಶ್ನೆ ಮಾಡಿದ್ದರು. ಬಳಿಕ ದರ್ಶನ್ ಪರ ವಕೀಲರು ಎಸ್​ಪಿಪಿಗೂ ದರ್ಶನ್ ವೈದ್ಯಕೀಯ ವರದಿಯ ಪ್ರತಿಯನ್ನು ನೀಡಿದ್ದರು. ಕೆಲ ಕಾಲ ವಾದ ಆಲಿಸಿದ ನ್ಯಾಯಾದೀಶರು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!