ಯದುವೀರ್ ಒಡೆಯರ್ ಪುತ್ರನಿಗೆ ತೊಟ್ಟಿಲು ಶಾಸ್ತ್ರ; ಚಾಮುಂಡಿಬೆಟ್ಟದ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ವಿಶೇಷ ಪೂಜೆ

cradle-ceremony
Spread the love

ನ್ಯೂಸ್ ಆ್ಯರೋ: ಸಂಸದರಾಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ 2ನೇ ಪುತ್ರನಿಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ‌ ದೇವಸ್ಥಾನದಲ್ಲಿ ತೊಟ್ಟಿಲು ಶಾಸ್ತ್ರ ಸಂಭ್ರಮದಿಂದ ನಡೆಯಿತು.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕಾ ದೇವಿ ದಂಪತಿಯ ಕಿರಿಯ ಪುತ್ರನಿಗೆ ತೊಟ್ಟಿಲುಶಾಸ್ತ್ರದ ಸಂಭ್ರಮ ನೆರವೇರಸಲಾಗಿದೆ. ಇದಕ್ಕೂ ಮೊದಲು ರಾಜವಂಶಸ್ಥರು ಚಾಮುಂಡಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ದೇವಿಗೆ ಪೂಜೆ ಕಾರ್ಯಗಳೆಲ್ಲ ಮುಗಿದ ಮೇಲೆ ಚಾಮುಂಡಿಬೆಟ್ಟದಲ್ಲಿ ದೇವಾಲಯದ ಬಳಿ ಇರುವ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ಪೂಜೆ ಮಾಡಿದರು.

ಇದಾದ ಮೇಲೆ ತೊಟ್ಟಿಲು ಶಾಸ್ತ್ರ ಮಾಡಲಾಯಿತು. ಈ ವೇಳೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ ಬಳಿಕ ತೊಟ್ಟಿಲು ಶಾಸ್ತ್ರ ನಡೆಸಲಾಗಿದ್ದು, ಇದೇ ವರ್ಷ ಅಕ್ಟೋಬರ್ 14ರ ದಸರಾ ದಿನವೇ ತ್ರಿಷಿಕಾ ಅವರು ಎರಡನೇ ಮಗುವಿಗೆ ಜನ್ಮ ನೀಡಿದ್ದರು.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕಾ ದಂಪತಿಗೆ ಈಗಾಗಲೇ ಒಂದು ಗಂಡು ಮಗುವಿದ್ದು, 2017ರ ಡಿಸೆಂಬರ್ 6 ರಂದು ಆದ್ಯವೀರ್ ಅವರು ಜನಿಸಿದ್ದರು. ಇದೀಗ 2ನೇ ಮಗನಿಗೆ ತೊಟ್ಟಿಲು ಶಾಸ್ತ್ರ ಮಾಡಲಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!