5ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ; ಡೆತ್ನೋಟ್ ನಲ್ಲಿ ಏನಿತ್ತು ಗೊತ್ತಾ ?

ನ್ಯೂಸ್ ಆ್ಯರೋ: ಡೆತ್ನೋಟ್ ಬರೆದಿಟ್ಟು ಪಿಜಿಯ ಐದನೇ ಮಹಡಿಯಿಂದ ಹಾರಿ ಆಂಧ್ರ ಪ್ರದೇಶದ ಕಡಪ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆ ದಿನ (ಅ.03) ಸಂಜೆ ವೈಟ್ಫೀಲ್ಡ್ ನ ಪ್ರಶಾಂತ್ ಲೇಔಟ್ನಲ್ಲಿ ನಡೆದಿದೆ.
ಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ, ಟಿಸಿಎಸ್ನಲ್ಲಿ ಕೆಲಸ ಮಾಡುತ್ತಿದ್ದರು.
ಇನ್ನು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಯುವತಿ, ‘ನನ್ನ ಮೃತ ದೇಹವನ್ನು ಪಿಎಂ(ಪೋಸ್ಟ್ ಮಾರ್ಟಂ) ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ.
ನನ್ನ ಪೋಷಕರಿಗೆ ನನ್ನ ಮೃತ ದೇಹ ನೀಡಿ ಎಂದು ಡೆತ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821
Leave a Comment