ಚಹಲ್, ಧನಶ್ರೀ ದಾಂಪತ್ಯದಲ್ಲಿ ಬಿರುಕು; ಮದ್ವೆಯಾಗಿ 4 ವರ್ಷಕ್ಕೆ ಸೆಲಿಬ್ರಿಟಿ ಜೋಡಿ ಡಿವೋರ್ಸ್
![Yuzvendra Chahal](https://news-arrow.com/wp-content/uploads/cwv-webp-images/2025/01/Yuzvendra-Chahal.png.webp)
ನ್ಯೂಸ್ ಆ್ಯರೋ: ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ನಡುವಿನ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದ್ದು, ಶೀಘ್ರವೇ ಡಿವೋರ್ಸ್ ಪಡೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಆಪ್ತ ಮೂಲಗಳ ಪ್ರಕಾರ ಇಬ್ಬರು ಪ್ರತ್ಯೇಕವಾಗುವುದು ನಿಜ. ವಿಚ್ಛೇದನ ಪ್ರಕ್ರಿಯೆಗಳು ಇನ್ನೂ ಅಂತಿಮಗೊಂಡಿಲ್ಲ. ಎಲ್ಲಾ ಷರತ್ತುಗಳು ಪೂರ್ಣಗೊಂಡ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ.
ಇಬ್ಬರು ಪ್ರತ್ಯೇಕವಾಗಲು ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ದಂಪತಿ ಪ್ರತ್ಯೇಕವಾಗಿ ತಮ್ಮ ಜೀವನವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ವದಂತಿಗೆ ಪೂರಕ ಎಂಬಂತೆ ಇಬ್ಬರೂ ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ದಾರೆ. ಚಹಲ್ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದರೆ ಧನಶ್ರೀ ಚಹಲ್ ಅವರೊಂದಿಗೆ ಫೋಟೋ ಡಿಲೀಟ್ ಮಾಡಿಲ್ಲ.
ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ಮದುವೆಯಾಗಿದ್ದರು. ಆ ಬಳಿಕ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಬ್ರೇಕ್ ಅಪ್‍ಗೆ ಮುಂದಾಗಿದ್ದಾರೆ ಎಂದು ಎರಡು ವರ್ಷದ ಹಿಂದೆ ಸುದ್ದಿ ಪ್ರಕಟವಾಗಿತ್ತು. ನಂತರ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ತೆರೆ ಎಳೆದಿದ್ದರು. ಕೊರೋನಾ ಕಾಲದ ಲಾಕ್‌ಡೌನ್ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಧನಶ್ರೀ ಎಂದು ಹೇಳಿದ್ದರು.
ಹಿಂದೆ ಚಹಲ್ ಹೊಸ ಜೀವನ ಆರಂಭ ಎಂದು ಪೋಸ್ಟ್ ಹಾಕಿಕೊಂಡಿದ್ದರು. ಅದೇ ಸಮಯಕ್ಕೆ ಧನಶ್ರೀ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿದ್ದ ಸರ್ ನೇಮ್ ಚಹಲ್ ಪದವನ್ನು ಕಿತ್ತುಹಾಕಿ ಧನಶ್ರೀ ವರ್ಮಾ ಎಂದು ಬದಲಾವಣೆ ಮಾಡಿಕೊಂಡಿದ್ದರು.
Leave a Comment